Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಸರ್ವೇಶ್ವರ ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದೆ?” ಎಂದು ಪ್ರಶ್ನೆ ಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಯೆಹೋವನು ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು - ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ; ನಾನು ನಿನಗೇನು ಮಾಡಿದ್ದೇನೆ ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಯೆಹೋವನು ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟನು. ಅದು ಬಿಳಾಮನಿಗೆ, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ?” ಎಂದು ಕೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:28
6 ತಿಳಿವುಗಳ ಹೋಲಿಕೆ  

ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.


ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.


ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?


ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”


ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.


ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು