Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:34 - ಕನ್ನಡ ಸಮಕಾಲಿಕ ಅನುವಾದ

34 ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಬಿಳಾಮನು - ನಾನು ಪಾಪಮಾಡಿದ್ದೇನೆ; ನೀನೇ ನನಗೆದುರಾಗಿ ದಾರಿಯಲ್ಲಿ ನಿಂತಿರುವದು ನನಗೆ ತಿಳಿಯಲಿಲ್ಲ; ನಾನು ಮಾಡುವದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:34
16 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.


ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.


ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು.


ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.


ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.


ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.


ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು