Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:35 - ಕನ್ನಡ ಸಮಕಾಲಿಕ ಅನುವಾದ

35 ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನ ದೂತನು ಅವನಿಗೆ - ಆ ಮನುಷ್ಯರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವದನ್ನೂ ಹೇಳಬಾರದು ಎಂದು ಹೇಳಲಾಗಿ ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:35
8 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.


ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.


ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.


ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು