Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:4 - ಕನ್ನಡ ಸಮಕಾಲಿಕ ಅನುವಾದ

4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಿದ್ಯಾನ್ಯರ ಹಿರಿಯರಿಗೆ, “ದನಕರುಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮುದಾಯದವರು ನಮ್ಮನ್ನೂ ನಮ್ಮ ಸುತ್ತಮುತ್ತಲಿನವರನ್ನೂ ನಿರ್ಮೂಲ ಮಾಡುವ ಹಾಗಿದೆ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದರು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:4
13 ತಿಳಿವುಗಳ ಹೋಲಿಕೆ  

ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.


ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.


ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.


ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.


ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.


ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು