ಅರಣ್ಯಕಾಂಡ 23:10 - ಕನ್ನಡ ಸಮಕಾಲಿಕ ಅನುವಾದ10 ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವದಕ್ಕೆ ಯಾರಿಂದಾದೀತು; ಇಸ್ರಾಯೇಲ್ಯರ ಕಾಲ್ಭಾಗವನ್ನಾದರೂ ಯಾರು ಹೇಳಬಲ್ಲರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.” ಅಧ್ಯಾಯವನ್ನು ನೋಡಿ |