Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:12 - ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಬಿಳಾಮನು, “ಸರ್ವೇಶ್ವರ ನುಡಿಸುವುದನ್ನೇ ನಾನು ನುಡಿಯಬೇಕಾಗಿದೆಯಲ್ಲವೆ?” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಬಿಳಾಮನು - ಯೆಹೋವನು ನುಡಿಸುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:12
11 ತಿಳಿವುಗಳ ಹೋಲಿಕೆ  

ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.


‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.


ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.


ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ. ಅವರು ಆಶೀರ್ವದಿಸಿದ ನಂತರ ನಾನು ಅದನ್ನು ಬದಲಾಯಿಸಲಾರೆನು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.


ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.


ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.


ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.


ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು