Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಿಳಾಮನು ಅವನಿಗೆ - ನೀನು ಇಲ್ಲೇ ಸರ್ವಾಂಗಹೋಮಮಾಡಿದ ಸ್ಥಳದಲ್ಲಿರು; ನಾನು ಅತ್ತಕಡೆ ಹೋಗಿ [ಯೆಹೋವನನ್ನು] ಎದುರುಗೊಳ್ಳುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:15
5 ತಿಳಿವುಗಳ ಹೋಲಿಕೆ  

ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.


ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.


ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.


ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.


ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು