ಅರಣ್ಯಕಾಂಡ 23:24 - ಕನ್ನಡ ಸಮಕಾಲಿಕ ಅನುವಾದ24 ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಜನಾಂಗದವರು ಪ್ರಾಯದ ಸಿಂಹದಂತೆ ಎದ್ದು ಮೃಗೇಂದ್ರನಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ರಕ್ತವನ್ನು ಕುಡಿದು ಮಾಂಸವನ್ನು ತಿಂದು ತೃಪ್ತಿಹೊಂದಿದ ಹೊರತು ಮಲಗುವದಿಲ್ಲವಷ್ಟೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.” ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.