ಅರಣ್ಯಕಾಂಡ 23:27 - ಕನ್ನಡ ಸಮಕಾಲಿಕ ಅನುವಾದ27 ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಬಳಿಕ ಬಾಲಾಕನು, “ಬಾ, ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದುಕೊಂಡು ಹೋಗುತ್ತೇನೆ. ಬಹುಶಃ ಅಲ್ಲಿಯಾದರು ನೀನು ಅವರನ್ನು ಶಪಿಸುವಂತೆ ದೇವರು ಅನುಮತಿಸಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತರುವಾಯ ಬಾಲಾಕನು ಬಿಳಾಮನಿಗೆ - ಬೇರೊಂದು ಸ್ಥಳಕ್ಕೆ ನಿನ್ನನ್ನು ಕರಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವದಕ್ಕೆ ಒಂದು ವೇಳೆ ದೇವರು ಅನುಮತಿಸಾನು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಮೇಲೆ ಬಾಲಾಕನು ಬಿಳಾಮನಿಗೆ, “ಸರಿ, ಇನ್ನೊಂದು ಸ್ಥಳಕ್ಕೆ ಬಾ. ಒಂದುವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷೆಪಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.