Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬೆಯೋರನ ಮಗ ಬಿಳಾಮನು ಹೇಳಿದ್ದು: ಸ್ಪಷ್ಟ ಕಣ್ಣುಳ್ಳ ಮನುಷ್ಯನು ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪದ್ಯರೂಪವಾಗಿ ಹೀಗೆಂದನು: ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೇಳು ಎಂದು ಹೇಳಿ ಪದ್ಯರೂಪವಾಗಿ ಇಂತೆಂದನು - ಬೆಯೋರನ ಮಗನಾದ ಬಿಳಾಮನಿಗುಂಟಾದ ದೇವೋಕ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಬಿಳಾಮನು ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು: ನಾನು ಸ್ಪಷ್ಟವಾಗಿ ನೋಡುತ್ತಿರುವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:15
6 ತಿಳಿವುಗಳ ಹೋಲಿಕೆ  

ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:


ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.


ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು