Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:16 - ಕನ್ನಡ ಸಮಕಾಲಿಕ ಅನುವಾದ

16 ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮನೋದೃಷ್ಟಿಯಿಂದ ನೋಡುವ ಪುರುಷನಿಗೆ ಬಂದ ದೇವೋಕ್ತಿ, ದೇವರ ಮಾತುಗಳನ್ನು ಕೇಳುವವನೂ ಪರಾತ್ಪರನ ಜ್ಞಾನವನ್ನು ಪಡೆದವನೂ ಪರವಶವಾಗಿ ಕಣ್ಣುತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನಿಗುಂಟಾದ ದೇವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:16
9 ತಿಳಿವುಗಳ ಹೋಲಿಕೆ  

ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು:


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಹೀಗೆ ಪ್ರವಾದಿಸಿದನು: “ಇದು ಬೆಯೋರನ ಮಗ ಬಿಳಾಮನ ಪ್ರವಾದನೆ: ಸ್ಪಷ್ಟ ಕಣ್ಣುಳ್ಳವನು ನುಡಿದದ್ದು.


ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬೆಯೋರನ ಮಗ ಬಿಳಾಮನು ಹೇಳಿದ್ದು: ಸ್ಪಷ್ಟ ಕಣ್ಣುಳ್ಳ ಮನುಷ್ಯನು ನುಡಿದದ್ದು.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು