Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:18 - ಕನ್ನಡ ಸಮಕಾಲಿಕ ಅನುವಾದ

18 ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:18
15 ತಿಳಿವುಗಳ ಹೋಲಿಕೆ  

ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.


ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”


ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.


ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು.


ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.”


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


“ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.


ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು.


ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು