Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:2 - ಕನ್ನಡ ಸಮಕಾಲಿಕ ಅನುವಾದ

2 ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲ್ಯರು ಅವನಿಗೆ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:2
17 ತಿಳಿವುಗಳ ಹೋಲಿಕೆ  

ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.


ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ,


ಹಾಗೆಯೇ ಅವನು ರಾಮದ ನಯೋತಿಗೆ ಹೋದನು. ಆಗ ದೇವರ ಆತ್ಮ ಮೇಲೆ ಬರಲು, ಅವನು ರಾಮದ ನಯೋತಿಗೆ ಸೇರುವವರೆಗೂ ಪ್ರವಾದಿಸುತ್ತಾ ಬಂದನು.


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.


ಕಾನಾನ್ಯನಾದ ಸೀಮೋನ ಮತ್ತು ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.


ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?


ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.


“ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು