Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:24 - ಕನ್ನಡ ಸಮಕಾಲಿಕ ಅನುವಾದ

24 ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:24
24 ತಿಳಿವುಗಳ ಹೋಲಿಕೆ  

ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.


ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು.


ಆ ಒರಟು ಹೋತವು ಗ್ರೀಕಿನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.


ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.


“ಒಂದು ಬೆಳ್ಳಿ ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಅವರನ್ನು ಕೇಳಲು ಅವರು, “ಕೈಸರನದು,” ಎಂದರು.


ಇದಲ್ಲದೆ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?


ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು