Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:8 - ಕನ್ನಡ ಸಮಕಾಲಿಕ ಅನುವಾದ

8 “ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:8
18 ತಿಳಿವುಗಳ ಹೋಲಿಕೆ  

ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”


ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.


ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.


ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.


ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು.


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.


ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.


ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.


ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.


ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.


ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು