ಅರಣ್ಯಕಾಂಡ 25:13 - ಕನ್ನಡ ಸಮಕಾಲಿಕ ಅನುವಾದ13 ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.