Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:18 - ಕನ್ನಡ ಸಮಕಾಲಿಕ ಅನುವಾದ

18 ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಪೆಗೋರದ ಸಂಗತಿಯಲ್ಲಿಯೂ ತಮ್ಮ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ವಕುಲ ಸ್ತ್ರೀಯ ಸಂಗತಿಯಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದರಲ್ಲಾ. (ಆ ಸ್ತ್ರೀಯು ಪೆಗೋರದ ಸಂಗತಿಯಿಂದ ಘೋರ ವ್ಯಾಧಿಯುಂಟಾದಾಗ ಹತವಾದಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:18
13 ತಿಳಿವುಗಳ ಹೋಲಿಕೆ  

ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು.


ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.


ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.


“ಮಿದ್ಯಾನ್ಯರನ್ನು ವೈರಿ ಎಂದು ತಿಳಿದು ಹೊಡೆಯಬೇಕು.


ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ,


ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು