ಅರಣ್ಯಕಾಂಡ 26:10 - ಕನ್ನಡ ಸಮಕಾಲಿಕ ಅನುವಾದ10 ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು. ಅಧ್ಯಾಯವನ್ನು ನೋಡಿ |