Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:28 - ಕನ್ನಡ ಸಮಕಾಲಿಕ ಅನುವಾದ

28 ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಜೋಸೆಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯಿಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೋಸೇಫನ ಮಕ್ಕಳು ಮನಸ್ಸೆ ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೋಸೇಫನ ಇಬ್ಬರು ಗಂಡುಮಕ್ಕಳು: ಮನಸ್ಸೆ ಮತ್ತು ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:28
9 ತಿಳಿವುಗಳ ಹೋಲಿಕೆ  

ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.


“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.


ಮನಸ್ಸೆಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ.


ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.


ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು