Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:55 - ಕನ್ನಡ ಸಮಕಾಲಿಕ ಅನುವಾದ

55 ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಪ್ರತಿಯೊಂದು ಕುಲದ ಮೂಲಪುರುಷನ ಹೆಸರನ್ನು ಬರೆದು ಚೀಟು ಹಾಕಿ ಆಯಾ ಕುಲಕ್ಕೆ ಸೊತ್ತನ್ನು ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:55
21 ತಿಳಿವುಗಳ ಹೋಲಿಕೆ  

ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.


ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.


ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.


ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.


ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.


ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.


ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.


ಇದಲ್ಲದೆ ಏಳನೆಯ ಚೀಟು ಬಿದ್ದ ಭಾಗವು ದಾನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು.


ಆರನೆಯ ಚೀಟು ಬಿದ್ದ ಭಾಗವು ನಫ್ತಾಲಿಯ ಗೋತ್ರದ್ದಾಗಿತ್ತು. ನಫ್ತಾಲಿಯ ಗೋತ್ರದ ಅವರ ಕುಟುಂಬಗಳ ಪ್ರಕಾರ ಪಾಲು ದೊರೆಯಿತು.


ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು.


ನಾಲ್ಕನೆಯ ಚೀಟು ಇಸ್ಸಾಕಾರನ ಸಂತತಿಯವರಿಗೆ ಬಿದ್ದಿತು.


ಮೂರನೆಯ ಚೀಟು ಬಿದ್ದ ಭಾಗ ಜೆಬುಲೂನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಬಿದ್ದಿತು. ಅವರ ಬಾಧ್ಯತೆಯ ಮೇರೆ ಸಾರೀದ್ ವರೆಗೂ ಇತ್ತು.


ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.


ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.


ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು.


ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.”


ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು.


“ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು