Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:62 - ಕನ್ನಡ ಸಮಕಾಲಿಕ ಅನುವಾದ

62 ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ : 23,000 ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಬೇರೆ ಇಸ್ರಾಯೇಲ್ಯರಿಗೆ ಸ್ವಾಸ್ತ್ಯದೊರಕಿದಂತೆ ಲೇವಿಯರಿಗೆ ಸ್ವಾಸ್ತ್ಯದೊರೆಯದೆ ಹೋದದರಿಂದ ಅವರು ಇಸ್ರಾಯೇಲ್ಯರೊಡನೆ ಲೆಕ್ಕಿಸಲ್ಪಡಲಿಲ್ಲ. ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ 23,000.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಈ ಜನರು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲರಿಗೆ ಕೊಟ್ಟ ಸ್ವಾಸ್ತ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:62
14 ತಿಳಿವುಗಳ ಹೋಲಿಕೆ  

ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು.


ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ.


“ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು.


ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ,


ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು.


ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.


ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.


ಲೇವಿಯರ ತಂದೆಗಳ ಗೋತ್ರವನ್ನು ಇತರರೊಂದಿಗೆ ಎಣಿಸಲಿಲ್ಲ.


ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು