Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:14 - ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:14
12 ತಿಳಿವುಗಳ ಹೋಲಿಕೆ  

ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.


“ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


“ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ.


ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ,


ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗತಕ್ಕದ್ದಲ್ಲ. ಆದರೆ ನೀವು ಆಚೆಗೆ ಹೋಗಿ, ಆ ಒಳ್ಳೆಯ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ.


ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು