Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:3 - ಕನ್ನಡ ಸಮಕಾಲಿಕ ಅನುವಾದ

3 “ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾಪದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:3
16 ತಿಳಿವುಗಳ ಹೋಲಿಕೆ  

ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.


ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು.


ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.


ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,


ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು