Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:11 - ಕನ್ನಡ ಸಮಕಾಲಿಕ ಅನುವಾದ

11 “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:11
32 ತಿಳಿವುಗಳ ಹೋಲಿಕೆ  

ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”


ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.


ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.


ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.


ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.


ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.


ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು.


ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.


ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.


ಬೋನು ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ? ಏನೂ ಸಿಕ್ಕಿಕೊಳ್ಳದಿದ್ದರೆ, ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ?


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು.


ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.


ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.


ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.


ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ. ಯಾಕೋಬನ ದೇವರ ನ್ಯಾಯ ಪ್ರಮಾಣವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು