Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:19 - ಕನ್ನಡ ಸಮಕಾಲಿಕ ಅನುವಾದ

19 ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಗಳನ್ನೂ ಸಮರ್ಪಿಸಬೇಕು; ಈ ಪಶುಗಳು ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಈ ಪಶುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:19
11 ತಿಳಿವುಗಳ ಹೋಲಿಕೆ  

ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.


ಆದರೆ ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.


ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.


ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು