Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:2 - ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:2
32 ತಿಳಿವುಗಳ ಹೋಲಿಕೆ  

ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ರಕ್ಷಣಾ ಮಾರ್ಗದಲ್ಲಿರುವವರಿಗೂ ನಾಶದ ಮಾರ್ಗದಲ್ಲಿರುವವರಿಗೂ ನಾವು ದೇವರಿಗೆ ಕ್ರಿಸ್ತ ಯೇಸುವಿನ ಪರಿಮಳವಾಗಿದ್ದೇವೆ.


“ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.


“ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!


ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.


ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.


ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.


ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.


ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.


ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.


ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.


ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.


ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಸುತ್ತಮುತ್ತಲಿನ ಜನರ ಭಯವಿದ್ದರೂ, ಅವರು ಬಲಿಪೀಠವನ್ನು ಅದರ ಅಸ್ತಿವಾರದ ಮೇಲೆ ಕಟ್ಟಿದರು. ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಅರ್ಪಿಸಿದರು.


“ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ”


ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.


ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.


ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.


ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.


ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು