Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:26 - ಕನ್ನಡ ಸಮಕಾಲಿಕ ಅನುವಾದ

26 “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 [ಪಸ್ಕವಾದ ಏಳು] ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮ ಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:26
13 ತಿಳಿವುಗಳ ಹೋಲಿಕೆ  

“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.


ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.


ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.


ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು