ಅರಣ್ಯಕಾಂಡ 28:31 - ಕನ್ನಡ ಸಮಕಾಲಿಕ ಅನುವಾದ31 ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ಪ್ರಾಣಿಗಳೆಲ್ಲಾ ಕಳಂಕರಹಿತವಾಗಿರಬೇಕು. ದೈನಿಕ ದಹನಬಲಿ ಮತ್ತು ಅದಕ್ಕೆ ಸೇರಿದ ಧಾನ್ಯನೈವೇದ್ಯ ಇವುಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನಾರ್ಪಣೆಗಳನ್ನೂ ಸೇರಿಸಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಈ ಪಶುಗಳೆಲ್ಲಾ ಪೂರ್ಣಾಂಗವಾಗಿಯೇ ಇರಬೇಕು. ನಿತ್ಯಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಈ ಪಶುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆಗಳಲ್ಲದೆ ಈ ಯಜ್ಞಗಳನ್ನು ಮತ್ತು ಅವುಗಳೊಡನೆ ಪಾನದ್ರವ್ಯಾರ್ಪಣೆಗಳನ್ನು ಅರ್ಪಿಸಬೇಕು. ನೀವು ಸಮರ್ಪಿಸುವ ಪಶುಗಳಲ್ಲಿಯೂ ಅಥವಾ ಪಾನದ್ರವ್ಯಸಮರ್ಪಣೆಗಳಲ್ಲಿಯೂ ಯಾವ ದೋಷವೂ ಇರಬಾರದು. ಅಧ್ಯಾಯವನ್ನು ನೋಡಿ |