ಅರಣ್ಯಕಾಂಡ 28:9 - ಕನ್ನಡ ಸಮಕಾಲಿಕ ಅನುವಾದ9 “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮವು, ಅದಕ್ಕೆ ಸೇರಿದ ಪಾನದ್ರವ್ಯವು ಇವುಗಳನ್ನಲ್ಲದೆ ನೀವು ಸಬ್ಬತ್‍ದಿನದಲ್ಲಿ ಹೆಚ್ಚಾಗಿ ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಗೋದಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 “ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.