Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳನ್ನೂ ಅರ್ಪಿಸಬೇಕು. ಅವುಗಳ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತ ಆದ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮಕ್ಕಾಗಿ ಹದಿಮೂರು ಹೋರಿಗಳನ್ನೂ ಎರಡು ಟಗರುಗಳನ್ನೂ ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:13
11 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.


“ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ಆದರೆ ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು.


ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.


“ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.


ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಮೂರು ಭಾಗ, ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಎರಡು ಭಾಗ,


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು