Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:13 - ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ವಾಸ್ತವವಾಗಿ ಇಸ್ರಯೇಲರ ಜೇಷ್ಠರೆಲ್ಲರು ನನ್ನ ಸೊತ್ತು, ಈಜಿಪ್ಟ್ ದೇಶದಲ್ಲಿ ಜೇಷ್ಠವಾದುದೆಲ್ಲವನ್ನು ನಾನು ಸಂಹಾರಮಾಡಿದಾಗ ಇಸ್ರಯೇಲರಲ್ಲಿಯ ಜೇಷ್ಠ ಮನುಷ್ಯರನ್ನೂ ಪಶುಪ್ರಾಣಿಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆ. ಆದರೆ ಈಗ ಅಂಥವರಿಗೆ ಬದಲಾಗಿ ಲೇವಿಯರನ್ನು ಆರಿಸಿಕೊಂಡಿದ್ದೇನೆ, ಅವರು ಸರ್ವೇಶ್ವರನಾದ ನನ್ನವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ಚೊಚ್ಚಲಾದವರೆಲ್ಲರು ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ ಪಶುಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ; ಅವರು ನನ್ನವರೇ; ನಾನು ಯೆಹೋವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:13
16 ತಿಳಿವುಗಳ ಹೋಲಿಕೆ  

ಕರ್ತದೇವರ ನಿಯಮದಲ್ಲಿ ಬರೆದಿರುವಂತೆ, “ಪ್ರತಿಯೊಂದು ಚೊಚ್ಚಲ ಗಂಡು ಮಗು ಕರ್ತದೇವರಿಗೆ ಪವಿತ್ರವಾಗಿ ಸಮರ್ಪಿಸಬೇಕು,”


ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.


“ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.


ಫರೋಹನು ಹಟಮಾರಿತನದಿಂದ ನಮ್ಮನ್ನು ಕಳುಹಿಸದೆ ಇದ್ದಾಗ, ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಎಂದರೆ, ಮನುಷ್ಯರ ಹಾಗೂ ಪಶುಪ್ರಾಣಿಗಳ ಚೊಚ್ಚಲಾದವುಗಳನ್ನು ಕೊಂದುಹಾಕಿದರು. ಆದ್ದರಿಂದ ಚೊಚ್ಚಲ ಗಂಡುಗಳನ್ನೆಲ್ಲಾ ಯೆಹೋವ ದೇವರಿಗೆ ಅರ್ಪಿಸುತ್ತೇವೆ. ನಮ್ಮ ಪುತ್ರರಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇವೆ,’


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.


“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ಪಶುಗಳಾಗಲಿ, ಎತ್ತುಗಳಾಗಲಿ, ಟಗರುಗಳಾಗಲಿ ಮೊದಲು ಹುಟ್ಟುವವುಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;


ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’ ” ಎಂದರು.


ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.


ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು