Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:3 - ಕನ್ನಡ ಸಮಕಾಲಿಕ ಅನುವಾದ

3 ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಅಭಿಷೇಕದಿಂದ ಪ್ರತಿಷ್ಠಿತರಾದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವರೇ ಯಾಜಕೋದ್ಯೋಗವನ್ನು ನಡಿಸುವದಕ್ಕಾಗಿ ಅಭಿಷೇಕದಿಂದ ಪ್ರತಿಷ್ಠಿತರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಗಂಡುಮಕ್ಕಳು ಯಾಜಕರಾಗಿ ಸೇವೆಮಾಡಲು ಅಭಿಷೇಕಿಸಲ್ಪಟ್ಟವರಾಗಿದ್ದರು ಮತ್ತು ಪ್ರತಿಷ್ಠೀತರಾದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:3
10 ತಿಳಿವುಗಳ ಹೋಲಿಕೆ  

ಅವುಗಳನ್ನು ನಿನ್ನ ಸಹೋದರ ಆರೋನನ ಮತ್ತು ಅವನ ಪುತ್ರರಿಗೆ ತೊಡಿಸಿ, ಅವರನ್ನು ಅಭಿಷೇಕಿಸಿ, ಪ್ರತಿಷ್ಠೆ ಮಾಡು. ಅವರು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವರನ್ನು ಶುದ್ಧಮಾಡು.


ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.


ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.


ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.


ಆರೋನನು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ, ಅವನನ್ನು ಶುದ್ಧಮಾಡಬೇಕು.


ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.


ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು