Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:32 - ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇದಲ್ಲದೆ ಮಹಾಯಾಜಕ ಆರೋನನ ಮಗ ಎಲ್ಲಾಜಾರನು ಲೇವಿಯರ ಮುಖ್ಯಸ್ಥರಿಗೆ ಅಧ್ಯಕ್ಷನಾಗಿದ್ದ; ದೇವಸ್ಥಾನವನ್ನು ಕಾಯುವವರಿಗೆ ಮೇಲ್ವಿಚಾರಕನಾಗಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನರಿಗೆ ಅಧ್ಯಕ್ಷನಾಗಿ ದೇವಸ್ಥಾನವನ್ನು ಕಾಯುವವರ ಮೇಲ್ವಿಚಾರಕನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:32
12 ತಿಳಿವುಗಳ ಹೋಲಿಕೆ  

ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.


ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.


“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು.


ಎಂದರೆ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ, ಅವರಲ್ಲಿ ಎಣಿಕೆಯಾದವರು 2,630 ಮಂದಿಯಾಗಿದ್ದರು.


ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು