Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:37 - ಕನ್ನಡ ಸಮಕಾಲಿಕ ಅನುವಾದ

37 ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಇವುಗಳ ಉಪಕರಣಗಳು, ಅಂಗಳದ ಸುತ್ತಲಿದ್ದ ಕಂಬಗಳು, ಅವುಗಳ ಗದ್ದಿಗೆ ಕಲ್ಲುಗಳು, ಗೂಟಗಳು ಮತ್ತು ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಇವರೇ ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅಂಗಳದ ಸುತ್ತಲಿರುವ ಕಂಬಗಳೂ ಅವುಗಳ ಗದ್ದಿಗೇ ಕಲ್ಲುಗಳೂ ಗೂಟಗಳೂ ಹಗ್ಗಗಳೂ ಇವುಗಳೇ. ಇವುಗಳ ಸಕಲ ವಿಧವಾದ ಪರಿಚರ್ಯವನ್ನು ಇವರೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಪವಿತ್ರ ಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೇಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:37
4 ತಿಳಿವುಗಳ ಹೋಲಿಕೆ  

ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ


ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.


ಗುಡಾರದ ಕೆಲಸಕ್ಕೆ ಬೇಕಾಗುವ ಎಲ್ಲಾ ಉಪಕರಣಗಳು, ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದವುಗಳಾಗಿರಬೇಕು.


“ಮೆರಾರೀಯ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ಎಣಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು