ಅರಣ್ಯಕಾಂಡ 3:38 - ಕನ್ನಡ ಸಮಕಾಲಿಕ ಅನುವಾದ38 ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆಯೂ ಆರೋನನೂ ಆರೋನನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲ್ಯರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು. ಅಧ್ಯಾಯವನ್ನು ನೋಡಿ |