Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:41 - ಕನ್ನಡ ಸಮಕಾಲಿಕ ಅನುವಾದ

41 ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆದರೆ ಸರ್ವೇಶ್ವರನೆಂಬ ನನ್ನ ಸೊತ್ತಾಗುವುದಕ್ಕೆ ನೀನು ಇಸ್ರಯೇಲರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಯೆಹೋವನೆಂಬ ನನ್ನ ಸೊತ್ತಾಗುವದಕ್ಕೆ ನೀನು ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ಯರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:41
10 ತಿಳಿವುಗಳ ಹೋಲಿಕೆ  

“ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.


“ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು.


ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.


ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.


ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು.


ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು