Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:50 - ಕನ್ನಡ ಸಮಕಾಲಿಕ ಅನುವಾದ

50 ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ದೇವರ ಸೇವೆಗೆ ನಿಗದಿಯಾದ ನಾಣ್ಯದ ಮೇರೆಗೆ 1365 ನಾಣ್ಯಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ 1365 ರೂಪಾಯಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಮೋಶೆಯು ಇಸ್ರೇಲರಲ್ಲಿ ಚೊಚ್ಚಲಾದ ಗಂಡಸರಿಂದ ಬೆಳ್ಳಿಯನ್ನು ಸಂಗ್ರಹಿಸಿದನು. ಅವನು ಅಧಿಕೃತ ಅಳತೆಯನ್ನು ಉಪಯೋಗಿಸಿ 1,365 ಶೆಕಲ್ ಬೆಳ್ಳಿಯನ್ನು ಸಂಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:50
9 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು