Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:6 - ಕನ್ನಡ ಸಮಕಾಲಿಕ ಅನುವಾದ

6 “ಲೇವಿಯ ಗೋತ್ರವನ್ನು ಹತ್ತಿರ ಕರೆದು, ಯಾಜಕನಾದ ಆರೋನನ ಮುಂದೆ ನಿಲ್ಲಿಸು. ಅವರು ಅವನಿಗೆ ಸಹಾಯ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನೀನು ಲೇವಿಕುಲದವರನ್ನು ಕರೆದುತಂದು ಅವರು ದೇವತಾ ಕಾರ್ಯಗಳಲ್ಲಿ ಯಾಜಕ ಆರೋನನಿಗೆ ಸಹಾಯಕರಾಗಿರುವಂತೆ ನಿಯುಕ್ತಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಲೇವಿ ಕುಲದವರನ್ನು ಹತ್ತಿರಕ್ಕೆ ಕರೆದು ಅವರು [ದೇವರ ಸೇವಾಕಾರ್ಯಕ್ಕಾಗಿ] ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಲೇವಿ ಕುಲದವರನ್ನು ಯಾಜಕನಾದ ಆರೋನನ ಬಳಿಗೆ ಕರೆದುಕೊಂಡು ಬಾ. ಅವರು ಆರೋನನಿಗೆ ಸಹಾಯಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:6
18 ತಿಳಿವುಗಳ ಹೋಲಿಕೆ  

ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲರೊಳಗೆ ಎಣಿಕೆಯಾಗಲಿಲ್ಲ.


ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.


ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.


ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.


“ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.


ಸೇವೆಗೆ ಆಯ್ಕೆಯಾದ ವ್ಯಕ್ತಿಗಳು ಮತ್ತು ಅವರ ಪುತ್ರರ ಹೆಸರುಗಳು ಹೀಗಿವೆ: ಕೊಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಅವನು ಯೋಯೇಲನ ಮಗನು, ಅವನು ಸಮುಯೇಲನ ಮಗನು,


ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.


ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು