Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:2 - ಕನ್ನಡ ಸಮಕಾಲಿಕ ಅನುವಾದ

2 ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:2
36 ತಿಳಿವುಗಳ ಹೋಲಿಕೆ  

“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು.


ನೀನು ದೇವರಿಗೆ ಪ್ರಾರ್ಥನೆಮಾಡುವೆ, ನಿನ್ನ ಪ್ರಾರ್ಥನೆಯನ್ನು ದೇವರು ಕೇಳುವರು; ನೀನು ಮಾಡಿದ ಹರಕೆಗಳನ್ನು ಸಲ್ಲಿಸುವೆ.


ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.


ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.


ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.


ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು,


ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು.


ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.


ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.


‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.


“ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.


ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.


ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.


ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.


ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.


“ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ,


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;


ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು