ಅರಣ್ಯಕಾಂಡ 30:5 - ಕನ್ನಡ ಸಮಕಾಲಿಕ ಅನುವಾದ5 ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಬೇಡವೆಂದು ಹೇಳಿದದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ತಂದೆಯು ಆ ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಇಟ್ಟುಕೊಂಡ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿ |