Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:9 - ಕನ್ನಡ ಸಮಕಾಲಿಕ ಅನುವಾದ

9 “ಇದಲ್ಲದೆ ವಿಧವೆಯಾದರೂ ವಿವಾಹ ವಿಚ್ಛೇದಿತ ಮಹಿಳೆಯಾದರೂ ಇಂತಹ ಹರಕೆ ಇಲ್ಲವೆ ಪ್ರಮಾಣ ಮಾಡಿಕೊಂಡರೆ ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ವಿಧವೆ ಇಲ್ಲವೆ ಗಂಡನಿಂದ ಬೇರ್ಪಟ್ಟ ಮಹಿಳೆ ಇಂಥ ಪ್ರಮಾಣವನ್ನು ಕೈಗೊಂಡಿದ್ದರೆ ಅದು ನಿಲ್ಲುತ್ತದೆ. ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂಥ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವದು; ಅವಳು ಅದನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ವಿಧವೆಯಾಗಲಿ ವಿವಾಹವಿಚ್ಛೇಧನ ಹೊಂದಿದ ಸ್ತ್ರೀಯಾಗಲಿ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:9
6 ತಿಳಿವುಗಳ ಹೋಲಿಕೆ  

ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ.


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


“ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.


“ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ,


ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು