ಅರಣ್ಯಕಾಂಡ 31:12 - ಕನ್ನಡ ಸಮಕಾಲಿಕ ಅನುವಾದ12 ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಆಸ್ತಿಪಾಸ್ತಿಯನ್ನೂ ತೆಗೆದುಕೊಂಡು ಜೆರಿಕೋ ಪಟ್ಟಣದ ಎದುರಿಗಿರುವ ಜೋರ್ಡನ್ ನದಿಯ ತೀರಕ್ಕೆ ಬಂದರು. ಅಲ್ಲಿ ಮೋವಾಬ್ಯರ ಮೈದಾನದ ಪಾಳೆಯದಲ್ಲಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್ ಹಾಗು ಇಸ್ರಯೇಲರ ಸರ್ವಸಮಾಜದವರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಸೆರೆಯವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಇಸ್ರಾಯೇಲ್ಯರ ಸರ್ವಸಮೂಹದವರು ಇವರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿ |