Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯುದ್ಧಭೂಮಿಯಿಂದ ಬಂದಿದ್ದ ಆ ಸೈನ್ಯದ ಸಹಸ್ರಾಧಿಪತಿಗಳನ್ನು ಹಾಗು ಶತಾಧಿಪತಿಗಳನ್ನು ಕಂಡು ಮೋಶೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಮೋಶೆಯು ಯುದ್ಧಭೂವಿುಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:14
13 ತಿಳಿವುಗಳ ಹೋಲಿಕೆ  

“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.


ಆದರೆ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಆಗ ಅರಾಮ್ಯರನ್ನು ನಾಶಮಾಡುವವರೆಗೂ ಹೊಡೆಯುತ್ತಿದ್ದೆ. ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಮಾತ್ರ ಹೊಡೆಯುವೆ,” ಎಂದನು.


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,


ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.


ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,


ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.


ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.


ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.


ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?


ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.


ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು