Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:15 - ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನೀವು ಮಹಿಳೆಯರನ್ನೆಲ್ಲ ಉಳಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಅವರಿಗೆ, “ನೀವು ಎಲ್ಲಾ ಹೆಂಗಸರನ್ನು ಉಳಿಸಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:15
13 ತಿಳಿವುಗಳ ಹೋಲಿಕೆ  

ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.


ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.


ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.


ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


ಆ ದಿನದಲ್ಲಿ ಆಯಿ ಎಂಬ ಪಟ್ಟಣದಲ್ಲಿಯ ಹನ್ನೆರಡು ಸಾವಿರ ಜನರು ಹತರಾದರು.


ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.


ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಕೊಟ್ಟಾಗ, ಅದರ ಗಂಡಸರೆಲ್ಲರನ್ನು ಸಂಹಾರಮಾಡಬೇಕು.


ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.


ಆದರೆ ಸ್ತ್ರೀಯರನ್ನೂ ಚಿಕ್ಕವರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲಾ ಆಸ್ತಿಯನ್ನೂ ನಿಮಗಾಗಿ ತಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವಂಥ ನಿಮ್ಮ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು