Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:21 - ಕನ್ನಡ ಸಮಕಾಲಿಕ ಅನುವಾದ

21 ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮಾಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗಂದನು - ಯೆಹೋವನು ಮೋಶೆಗೆ ಅಪ್ಪಣೆಮಾಡಿದ ವಿಧಿ ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:21
3 ತಿಳಿವುಗಳ ಹೋಲಿಕೆ  

ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.


ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.


ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು