ಅರಣ್ಯಕಾಂಡ 31:30 - ಕನ್ನಡ ಸಮಕಾಲಿಕ ಅನುವಾದ30 ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |