Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:54 - ಕನ್ನಡ ಸಮಕಾಲಿಕ ಅನುವಾದ

54 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಆದರೆ ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಕೊಟ್ಟ ಚಿನ್ನವನ್ನು ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಸ್ವೀಕರಿಸಿ ಅದನ್ನು ಇಸ್ರಯೇಲರಿಗೋಸ್ಕರ ಸ್ಮರಣಾರ್ಥವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದೊಳಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲ್ಯರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕಕೊಡುವದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:54
12 ತಿಳಿವುಗಳ ಹೋಲಿಕೆ  

ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.


ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.


ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.


ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು