Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:1 - ಕನ್ನಡ ಸಮಕಾಲಿಕ ಅನುವಾದ

1 ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:1
30 ತಿಳಿವುಗಳ ಹೋಲಿಕೆ  

ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.


ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ,


“ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,


ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”


ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.


ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.


ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.


ಬೇರೆ ಜನಸಮೂಹವೂ ಕುರಿದನ ಮೊದಲಾದ ಪಶುಗಳ ಬಹುದೊಡ್ಡ ಹಿಂಡೂ ಇಸ್ರಾಯೇಲರ ಸಂಗಡ ಹೋದವು.


ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.


ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.


ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:


ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.”


ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.


ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು.


ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.


ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ


ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.


ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲು ನಿನ್ನ ನಿಮಿತ್ತವಾಗಿ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ, ನಿನ್ನ ದ್ರಾಕ್ಷಿ ಸುಗ್ಗಿಯ ಮೇಲೆಯೂ ವಿನಾಶ ಮಾಡುವವನು ಬಿದ್ದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು