Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವರಾಗಿ ಪ್ರಮಾಣಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಕಾಲದಲ್ಲಿ ಯೆಹೋವನು ಕೋಪಗೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು ಕೋಪಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:10
8 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.


ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು