Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:15 - ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಆತನನ್ನು ಹಿಂಬಾಲಿಸದೆ ನಡೆಯುವ ಕಾರಣ ಆತನು ಈ ಜನರನ್ನು ಅರಣ್ಯದಲ್ಲಿ ಇನ್ನೂ ಇರಿಸಿದರೆ ಈ ಸಮಸ್ತಜನಾಂಗದ ನಾಶಕ್ಕೆ ನೀವೇ ಕಾರಣರಾಗುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:15
14 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.


ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!


“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.


ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು